BengaluruCrime

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಸರಬರಾಜು; ನಾಲ್ವರು ಆರೋಪಿಗಳ ಅರೆಸ್ಟ್‌

ಬೆಂಗಳೂರು; ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಇದೇ ವೇಳೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಲಿವೆ. ಹೀಗಾಗಿ, ಪೊಲೀಸರು ತೀವ್ರ ನಿಗಾ ಇಟ್ಟಿದ್ದಾರೆ. ಹೊಸ ವರ್ಷಾಚರಣೆ ವೇಳೆ ಡ್ರಗ್ಸ್‌ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ನೆಲಮಂಗಲದ ಮನೆಯೊಂದರ ಮೇಲೆ ದಾಳಿ ಮಾಡಲಾಗಿದ್ದು, ನಾಲ್ವರು ಡ್ರಗ್‌ ಪೆಡ್ಲರ್‌ಗಳನ್ನು ಅರೆಸ್ಟ್‌ ಮಾಡಲಾಗಿದೆ.

ಇವರು ಡಿಸೆಂಬರ್‌ 31ರಂದು ಸರಬರಾಜು ಮಾಡಲು ಅಪಾರ ಪ್ರಮಾಣದ ಡ್ರಗ್ಸ್‌ ಆರ್ಡರ್‌ ಪಡೆದಿದ್ದರು ಎಂಬ ಮಾಹಿತಿ ಸಿಕ್ಕಿದೆ. ಗಂಗೊಂಡನಹಳ್ಳಿ ಅನಿಲ್‌, ಅಂದ್ರಹಳ್ಳಿ ಕಾರ್ತೀಕ್‌, ನವೀನ್‌, ದೊಂಬರಹಳ್ಳಿ ಮಂಜುನಾಥ್‌ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ಎರಡು ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಎರಡು ಬೈಕ್‌ಗಳು, ಚಾಕುಗಳನ್ನು ಜಪ್ತಿ ಮಾಡಲಾಗಿದೆ.

Share Post