ಕೌಟುಂಬಿಕ ಕಲಹ ಹಿನ್ನೆಲೆ: ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ
ಬೆಂಗಳೂರು: ೨೬ ವರ್ಷದ ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೀರಣ್ಣ ಪಾಳ್ಯದಲ್ಲಿ ನಡೆದಿದೆ. ೨೬ ವರ್ಷದ ಸಂಗೀತಾ ಆತ್ಮಹತ್ಯೆ ಮಾಡಿಕೊಂಡವರು.
ಸಂಗೀತಾ ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಕೆಲ ತಿಂಗಳಿಂದ ಕೌಟುಂಬಿಕ ಕಲಹ ಏರ್ಪಟ್ಟಿತ್ತು ಎಂದು ಹೇಳಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿಯೇ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.