BengaluruCrime

ನಟಿ ರಕುಲ್‌ ಪ್ರೀತ್‌, ಶಾಸಕ ರೋಹಿತ್‌ ರೆಡ್ಡಿಗೆ ನೋಟಿಸ್‌

ಬೆಂಗಳೂರು; ಗೋವಿಂದಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಡ್ರಗ್ಸ್​ ಪ್ರಕರಣ ಸಂಬಂಧ ತೆಲಂಗಾಣದ ಬಿಆರ್‌ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಹಾಗೂ ನಟಿ ರಕುಲ್ ಪ್ರೀತ್ ಸಿಂಗ್​ಗೆ ಇಡಿ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ಡಿಸೆಂಬರ್ 19ರಂದು ಹೈದರಾಬಾದ್​ ಇಡಿ ಕಚೇರಿಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

2021ರಲ್ಲಿ ಬೆಂಗಳೂರಿನ ಗೋವಿಂದಪುರ ಪೊಲೀಸರು ಈ ಪ್ರಕರಣ ದಾಖಲಿಸಿದ್ದರು. ಉದ್ಯಮಿ ಕಲಹರ್ ರೆಡ್ಡಿ ಜೊತೆಗೆ ಚಿತ್ರ ನಿರ್ಮಾಪಕ ಶಂಕರ್ ಗೌಡ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಯಲ್ಲಿ 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು.

 

Share Post