ಪಠ್ಯ ಪುಸ್ತಕ ಪರಿಷ್ಕರಣೆ ಕೈಬಿಟ್ಟು ಹಿಂದಿನ ಪಠ್ಯಕ್ರಮ ಮುಂದುವರೆಸಿ; ಕಾಂಗ್ರೆಸ್ ಆಗ್ರಹ
ಬೆಂಗಳೂರು; ಪರಿಷ್ಕರಣೆಯಾಗಿರುವ ಪಠ್ಯವನ್ನು ಕಸದ ಬುಟ್ಟಿಗೆ ಹಾಕಿ ಹಳೇ ಪಠ್ಯಕ್ರಮವನ್ನೇ ಮುಂದುವರೆಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ಹಿನ್ನೆಲೆಯಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ರಾಜ್ಯದಲ್ಲಿ ಅಶಾಂತಿ ಸೃಷ್ಟಿ ಮಾಡುತ್ತಿದೆ. ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಅಂಬೇಡ್ಕರ್, ಬಸವಣ್ಣ, ಕುವೆಂಪು ಅವರಿಗೆ ಅವಮಾನ ಮಾಡಲಾಗಿದೆ,. ಹೀಗಾಗಿ ಇದರ ವಿರುದ್ಧ ಕಾಂಗ್ರೆಸ್ ದೊಡ್ಡ ಹೋರಾಟ ರೂಪಿಸಲಿದೆ. ಈ ವಿಚಾರವನ್ನು ನಾವು ತಾಲ್ಲೂಕು ಮಟ್ಟಕ್ಕೆ ಕೊಂಡೊಯ್ಯುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದರು.