BengaluruCrime

ಬಾಂಬ್‌ ಬೆದರಿಕೆ ಪ್ರಕರಣ ಹಗುರವಾಗಿ ನೋಡಲ್ಲ; ಮಧು ಬಂಗಾರಪ್ಪ

ಶಿವಮೊಗ್ಗ; ಶಾಲೆಗಳಿಗೆ ಬಾಂಬ್‌ ಬೆದರಿಕೆ ಪ್ರಕರಣವನ್ನು ಸರ್ಕಾರ ಹಗುರವಾಗಿ ನೋಡುವುದಿಲ್ಲ. ಈ ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸಾಗರದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಬೆದರಿಕೆ ಒಡ್ಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಲಾಗಿದೆ. ಇದನ್ನು ನಾವು ಸಹಿಸುವುದಿಲ್ಲ. ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಬೆದರಿಕೆ ಬಂದಿರುವ ಶಾಲೆಗಳಿಗೆ ಸರ್ಕಾರದಿಂದ ಎಲ್ಲಾ ರೀತಿಯ ರಕ್ಷಣೆ ಕೊಡುತ್ತೇವೆ. ಈ ಬಗ್ಗೆ ಗೃಹ ಸಚಿವರ ಜೊತೆ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಈಗಾಗಲೇ ನಾನು ಮಾತನಾಡಿದ್ದೇನೆ. ಯಾರು ಹೆದರುವುದು ಬೇಡ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

 

Share Post