BengaluruCrimeNational

ಬ್ರಿಡ್ಜ್‌ನಿಂದ ಕೆಳಗೆ ಬಿದ್ದ ಬಸ್‌; 15 ಮಂದಿ ದಾರುಣ ಸಾವು

ಭೋಪಾಲ್; ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಬಸ್ ಸೇತುವೆಯಿಂದ ಬಿದ್ದು 15 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವು-ನೋವುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಅಪಘಾತಕ್ಕೀಡಾದವರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಖಾರ್ಗೋನ್ ಎಸ್ಪಿ ಧರಮ್ ವೀರ್ ಸಿಂಗ್ ಹೇಳಿದ್ದಾರೆ. ಬಸ್‌ ಇಂದೋರ್‌ಗೆ ತೆರಳುತ್ತಿತ್ತು. ಈ ವೇಳೆ ಬಸ್‌ ಒಂದು ಸೇತುವೆಯಿಂದ ಸ್ಕಿಡ್‌ ಆಗಿ ಕೆಳಗೆ ಬಿದ್ದಿದೆ. ಬಸ್‌ನಲ್ಲಿ ಐವತ್ತಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡುತ್ತಿದ್ದರೆಂದು ತಿಳಿದುಬಂದಿದೆ.

Share Post