ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಬಿಗ್ ರಿಲೀಫ್
ಬೆಂಗಳೂರು; ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ. ಇದರಿಂದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಾನೂನು ಕಂಟಕದಿಂದ ಕೊಂಚ ರಿಲೀಫ್ ಸಿಕ್ಕಿದೆ.
ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ತಡೆಕೋರಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕೆಲ ದಿನಗಳ ಹಿಂದೆ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ, ಇಂದಿಗೆ ವಿಚಾರಣೆಯನ್ನು ಮುಂದೂಡಿತ್ತು. ಇಂದು ವಿಚಾರಣೆ ನಡೆಸಿದ ಕೋರ್ಟ್, ಮಧ್ಯಂತರ ತಡೆಯಾಜ್ಞೆಯನ್ನು ಮತ್ತೆ ವಿಸ್ತರಣೆ ಮಾಡಿದೆ.