BengaluruPolitics

ಅಕ್ಕಿ ಕೊಡದ ಕೇಂದ್ರ ಸರ್ಕಾರ; ನಾಳೆ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು; ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡೋದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಬಿಟ್ಟಿದೆ. ಕೇಂದ್ರ ಸರ್ಕಾರ ನಿಗದಿ ಮಾಡಿದ ಹಣ ಕೊಡುತ್ತೇವೆ ಎಂದರೂ ಅಕ್ಕಿ ಕೊಡುತ್ತಿಲ್ಲ. ಇದು ಮಲತಾಯಿ ದೋರಣೆ ಎಂದು ರಾಜ್ಯ ಕಾಂಗ್ರೆಸ್‌ ಆರೋಪ ಮಾಡಿದೆ. ಹೀಗಾಗಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ನಿಂದ ನಾಳೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ ನಡೆಸಲಿದೆ.

ರಾಜಕೀಯ ಉದ್ದೇಶದಿಂದಲೇ ಕೇಂದ್ರ ಬಿಜೆಪಿ ಸರ್ಕಾರ ನೀಡುತ್ತಿಲ್ಲ. ಇದರಿಂದ ಬಡವರ ಹೊಟ್ಟೆ ಮೇಲೆ ಬರೆ ಎಳೆಯಲು ಹೊರಟಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ. ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ನೇತೃತ್ವದಲ್ಲಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಮೆರವಣಿಗೆಗಳು ನಡೆಯಲಿವೆ. ನಾಳೆ ಬೆಳಗ್ಗೆ 11 ಗಂಟೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಮೆರವಣಿಗೆಗಳು ನಡೆಯಲಿವೆ. ಬೆಂಗಳೂರಿನಲ್ಲೂ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗುತ್ತಿದೆ.

 

Share Post