BengaluruPolitics

ಸಿಎಂ ಬದಲಾವಣೆ ವಿಚಾರ ವದಂತಿ ಅಷ್ಟೇ; ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು; ಮುಖ್ಯಮಂತ್ರಿ ಬದಲಾವಣೆ ಎಂಬುದು ವದಂತಿ ಅಷ್ಟೇ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಪ್ರಶ್ನೆ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವದಂತಿಗಳಿಗೆ ಕಿವಿಗೊಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿಯವರು ಸರ್ಕಾರದ ಉಳಿದ ಅವಧಿಯನ್ನು ಪೂರೈಸುತ್ತಾರೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಮುಂದೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Share Post