ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ
ಬೆಂಗಳೂರು; ಶಸ್ತ್ರಚಿಕಿತ್ಸೆಗೊಳಗಾಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಇಂದು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದರು. ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಬೊಮ್ಮಾಯಿಯವರ ಆರೋಗ್ಯ ವಿಚಾರಿಸಿದರು.
ನಾಲ್ಕೈದು ದಿನಗಳ ಹಿಂದೆ ಬೊಮ್ಮಾಯಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಬೇಗ ಗುಣಮುಖರಾಗುವಂತೆ ಬೊಮ್ಮಾಯಿಗೆ ಹಾರೈಸಿದರು.