BengaluruPolitics

BWSSB ಪರಿಸ್ಥಿತಿ ಚಿಂತಾಜನಕವಾಗಿದೆ; ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು; ಬಿಡಬ್ಲ್ಯೂ ಎಸ್ ಎಸ್ ಬಿ ಪರಿಸ್ಥಿತಿ ಬಹಳ ಚಿಂತಾಜನಕವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬಿಡಬ್ಲ್ಯೂಎಸ್ಎಸ್ಬಿ ಕಚೇರಿ ಬಳಿ ಮಾತನಾಡಿದ ಅವರು,  2014 ರಿಂದ ಇಲ್ಲಿಯವರೆಗೂ ನೀರಿನ ದರ ಪರಿಷ್ಕರಣೆಯಾಗಿಲ್ಲ. ಸಂಸ್ಥೆಯಲ್ಲಿ ವೇತನ ಹಾಗೂ ವಿದ್ಯುತ್ ಬಿಲ್ ಪಾವತಿಗೆ ಹಣವಿಲ್ಲದಂತಾಗಿದೆ ಎಂದರು.

ಇಲ್ಲಿನ ಸಿಬ್ಬಂದಿ ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇವರಿಗೆ ಪರಿಹಾರ ಕಂಡುಕೊಡಬೇಕು.  ಅಧಿಕಾರಿಗಳು ಅಕ್ರಮ ನೀರಿನ ಸಂಪರ್ಕವನ್ನು 48%ನಿಂದ 28%ಗೆ ಇಳಿಸಿದ್ದಾರೆ. ಈ ಅನಧಿಕೃತ ನೀರಿನ ಸಂಪರ್ಕದ ಬಗ್ಗೆ ನನಗೆ ವರದಿ ನೀಡಿದ್ದು, ಎಲ್ಲೆಲ್ಲಿ ಅನಧಿಕೃತ ಸಂಪರ್ಕ ಇದೆ ಎಂದು ಪತ್ತೆಹಚ್ಚಲು ಹೇಳಿದ್ದೇನೆ. ಈ ಸಂಸ್ಥೆಗೆ ಕಡಿಮೆ ದರದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ಆದರೂ ಬರುವ 104 ಕೋಟಿಯಲ್ಲಿ 90 ರಿಂದ 95 ಕೋಟಿಯಷ್ಟು ವಿದ್ಯುತ್ ಬಿಲ್ ಪಾವತಿಸುವಂತಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಇಲ್ಲಿ ಸಂಪನ್ಮೂಲ ಕ್ರೂಢೀಕರಣ ಆಗಬೇಕಿದೆ. ಇಲ್ಲದಿದ್ದರೆ ಇಂತಹ ಸಂಸ್ಥೆ ಉಳಿಯಲು ಸಾಧ್ಯವಿಲ್ಲ. ಬೆಂಗಳೂರಿನ ಜನರಿಗೆ ಬಹಳ ಸ್ವಚ್ಛವಾದ ನೀರನ್ನು ಪೂರೈಸಬೇಕು. ಇದಕ್ಕಾಗಿ ಎಲ್ಲೆಲ್ಲಿ ಸ್ವಚ್ಛ ನೀರು ನೀಡಲು ಸಾಧ್ಯವಾಗುತ್ತಿಲ್ಲ ಅಲ್ಲಿ ನೀರಿನ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ನೂತನ ದರದ ವಿಚಾರವಾಗಿ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡಲಾಗುವುದು ಎಂದು ಡಿಕೆಶಿ ಇದೇ ಸಂದರ್ಭದಲ್ಲಿ ತಿಳಿಸಿದರು.

 

Share Post