BengaluruPolitics

ಕಾಂಗ್ರೆಸ್‌ಗೆ ಅಂಬೇಡ್ಕರ್‌ ಬರೆದ ಸಂವಿಧಾನದ ಬಗ್ಗೆಯೇ ನಂಬಿಕೆ ಇಲ್ಲ; ಬೊಮ್ಮಾಯಿ

ಬೆಂಗಳೂರು;  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ವಿಚಾರವಾಗಿ ಡಬಲ್‌ ಎಂಜಿನ್‌ ಸರ್ಕಾರ ಡಬಲ್‌ ದ್ರೋಹ ಮಾಡಿದೆ ಎಂದು ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜವೇಲಾ ನೀಡಿದ್ದ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೀಸಲಾತಿಯನ್ನು ಜನಸಂಖ್ಯೆ ಆಧಾರಿತವಾಗಿ ಕೊಡಬೇಕು ಎಂದು ಹೇಳಲಾಗಿದೆ. ನಾವು ಅದಕ್ಕನುಗುಣವಾಗಿ ಮೀಸಲಾತಿ ಕೊಟ್ಟು, ಶೆಡ್ಯೂಲ್‌ 9ರಲ್ಲಿ ಸೇರಿಸಬೇಕೆಂದು ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಆದ್ರೆ ಕಾಂಗ್ರೆಸ್‌ಗೆ ಅಂಬೇಡ್ಕರ್‌ ಬರೆದ ಸಂವಿಧಾನದ  ಬಗ್ಗೆಯೇ ನಂಬಿಕೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಳಮೀಸಲಾತಿಯನ್ನು ಅವರ ಕಾಲದಲ್ಲಿ ನೀಡಲಿಲ್ಲ. ಕಾಂಗ್ರೆಸ್‌ ಬರೀ ವೋಟ್‌ ಬ್ಯಾಂಕ್‌ಗಾಗಿ ದಲಿತರನ್ನು ಬಳಸಿಕೊಳ್ಳುತ್ತಿದೆ ಎಂದು ಸಿಎಂ ಬೊಮ್ಮಾಯಿ ಆರೋಪಿಸಿದರು. ನಾವು ಪರಿಶಿಷ್ಟ ಪಂಗಡ ಹಾಗೂ ಜಾತಿಯವರ ಮೀಸಲಾತಿಯನ್ನು ಹೆಚ್ಚಳ ಮಾಡಿ ಕೇಂದ್ರಕ್ಕೆ ಶಿಫಾರಸು ಕೂಡಾ ಮಾಡಿದ್ದೇವೆ. ನಾವು ದಲಿತ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದಕ್ಕೆ ನಮ್ಮ ವಿರುದ್ಧ ಕಾಂಗ್ರೆಸ್‌ ನಾಯಕರು ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ದೂರಿದರು.

 

Share Post