BengaluruPolitics

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹೆಚ್ಚು ದಿನ ಉಳಿಯಲ್ಲ; ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು; ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಅವರು, ಈ ಮಾತನ್ನು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣರಾಗಿದ್ದಾರೆ.

ನನ್ನ ಸರ್ಕಾರವನ್ನು ಹೇಗೆ ತೆಗೆದರೋ ಅದೇ ರೀತಿ ಈ ಸರ್ಕಾರವೂ ಮುಳುತ್ತದೆ. ಶೀಘ್ರದಲ್ಲೇ ರಾಜ್ಯ ಕಾಂಗ್ರೆಸ್‌ ಸರ್ಕಾರ ಇರೋದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ೧ ವರ್ಷ ೧೪ ತಿಂಗಳಲ್ಲಿ ನನ್ನ ಸರ್ಕಾರ ತೆಗೆದರು. ಅವರಿಗೂ ಕೂಡಾ ಅದೇ ರೀತಿ ಆಗಲಿದೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಕಾಂಗ್ರೆಸ್‌ ನಾಯಕರು ಕುಮಾರಸ್ವಾಮಿ ವಿರುದ್ಧ ಆಕ್ರೋಶಗಳನ್ನು ಹೊರಹಾಕಿದ್ದಾರೆ.

Share Post