BengaluruCrime

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ; ಡಿ.ಕೆ.ಶಿವಕುಮಾರ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಮತ್ತೆ ಕಾನೂನೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಅಕ್ರಮ ಆಸ್ತಿ ಸಂಪಾದನೆ ಹಾಗೂ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದ ಸಂಪೂರ್ಣ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಡಿ.ಕೆ.ಶಿವಕುಮಾರ್‌ ವಿರುದ್ಧ ದಾಖಲೆಗಳ ಸಮೇತ ಚಾರ್ಜ್‌ಶೀಟ್‌ ದಾಖಲು ಮಾಡಿದ್ದಾರೆ. ದೆಹಲಿಯ ಇಡಿ ವಿಶೇಷ ನ್ಯಾಯಾಲಯದಲ್ಲಿ ತನಿಖಾಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.

2019ರಲ್ಲಿ ಡಿ.ಕೆ.ಶಿವಕುಮಾರ್‌ ಅವರ ಮನೆ ಹಾಗೂ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ ಹಾಗೂ ಅಕ್ರಮ ವರ್ಗಾವಣೆ ಮಾಡಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆದು, ಅವರನ್ನು ಬಂಧಿಸಲಾಗಿತ್ತು. ಹಲವು ದಿನಗಳ ಕಾಲ ಜೈಲು ವಾಸ ಅನುಭವಿಸಿ, ಡಿ.ಕೆ.ಶಿವಕುಮಾರ್‌ ಬೇಲ್‌ ಮೇಲೆ ಹೊರಬಂದಿದ್ದರು.

ಆದ್ರೆ ಪ್ರಕರಣದ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಿರುವ ಇಡಿ ಅಧಿಕಾರಿಗಳು ಎರಡು ವರ್ಷದ ನಂತರ ಕೋರ್ಟ್‌ನಲ್ಲಿ ಚಾರ್ಜ್‌ಶೀಟ್‌ ದಾಖಲು ಮಾಡಿದ್ದಾರೆ. ಇದರ ಆಧಾರದ ಮೇಲೆ ಕೋರ್ಟ್‌ ವಿಚಾರಣೆ ನಡೆಸಲಿದ್ದು, ಕೋರ್ಟ್‌ನಲ್ಲಿ ಕೂಡಾ ಇಡಿ ಅಧಿಕಾರಿಗಳು ಸಲ್ಲಿಸಿರುವ ಶಾರ್ಜ್‌ಶೀಟ್‌ನಲ್ಲಿನ ಅಂಶಗಳು ಸಾಬೀತಾದರೆ, ಡಿ.ಕೆ.ಶಿವಕುಮಾರ್‌ ಅವರಿಗೆ ಜೈಲು ಶಿಕ್ಷೆಯಾಗುವ ಸಾದ್ಯತೆ ಇದೆ. ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.

Share Post