ಪಠ್ಯಪುಸ್ತಕ ಪರಿಷ್ಕರಣೆ ಅಂತಿಮ ವರದಿ ರೆಡಿ; ಯಾವ ಪಠ್ಯಕ್ಕೆ ಕೊಕ್ ನೀಡಲಾಗುತ್ತೆ..?
ಬೆಂಗಳೂರು; ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಇಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಂದಿನ ಸಂಪುಟ ಸಭೆಯಲ್ಲಿ ಈ ವರದಿ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಕ್ಯಾಬಿನೆಟ್‌ನಲ್ಲಿ ಚರ್ಚಿಸಿದ ನಂತರ ಅಂತಿಮ ತೀರ್ಮಾನದ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ, ಯಾವ ಪಠ್ಯಕ್ಕೆ ಕೊಕ್ ನೀಡಲಾಗಿದೆ ಎಂಬುದರ ಬಗ್ಗೆ ಕುತೂಹಲ ಮೂಡಿದೆ.
ಕಳೆದ ವರ್ಷ ಪಠ್ಯ ಪರಿಷ್ಕರಣೆ ಮಾಡಿದಾಗ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಗಡೆವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಹಾಗೂ ವಿದ್ವಾಂಸರಾದ ಬನ್ನಂಜೆ ಗೋಂವಿದಾಚಾರ್ಯ ಅವರ ಪಠ್ಯಗಳನ್ನು ಸೇರಿಸಲಾಗಿತ್ತು. ಆದ್ರೆ ಇವುಗಳ ಬಗ್ಗೆ ವಿವಾದ ಎದ್ದಿದ್ದರಿಂದ, ಇವುಗಳನ್ನು ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ.
ಇವರ ಪಠ್ಯಗಳಿಗೆ ಕತ್ತರಿ ಹಾಕಿ ಬೇರೆ ಪಠ್ಯಗಳನ್ನು ಸೇರಿಸುವ ಸಾಧ್ಯತೆ ಇದೆ.
ಇನ್ನು ಈಗಾಗಲೇ ರಾಜ್ಯದೆಲ್ಲಡೆ ಶಾಲೆಗಳು ಆರಂಭವಾಗಿವೆ. ಪುಸ್ತಕಗಳು ಮುದ್ರಣವಾಗಿ ಶಾಲೆಗಳಿಗೆ ತಲುಪಿವೆ. ಹೀಗಾಗಿ ದೊಡ್ಡ ಮಟ್ಟದಲ್ಲಿ ತಿದ್ದುಪಡಿ ಮಾಡದೆ ವಿವಾದಿತ ಪಾಠಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ ಎನ್ನಲಾಗಿದೆ.