BengaluruPolitics

ಮೈಸೂರು ದಸರಾ ಅದ್ದೂರಿ, ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನ

ಬೆಂಗಳೂರು; ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನು ಅದ್ದೂರಿಯಿಂದ ಆಚರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಈ ಉತ್ಸವ ಜನರ ಉತ್ಸವವಾಗಬೇಕು. ಹೀಗಾಗಿ ಈ ಬಾರಿಯ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ದಸರಾ ಉತ್ಸವದ ಸಂಬಂಧ ಇಂದು ಉನ್ನತ ಮಟ್ಟದ ಸಮಿತಿ ಸಭೆ ನಡೆಸಲಾಯಿತು. ಈ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಅಕ್ಟೋಬರ್‌ 15ರಂದು ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದ್ದು, ವಿಜಯದಶಮಿಯಂದು ಪಂಜಿನ ಕವಾಯತು ನಡೆಯಲಿದೆ. ದಸರಾ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಕೂಡಾ ಮಾಡಲು ನಿರ್ಧಾರ ಮಾಡಲಾಗಿದೆ.

ಮೈಸೂರು ನಗರದಾದ್ಯಂತ ದೀಪಾಲಂಕಾರ, ಅದ್ದೂರಿ ಜಂಬೂ ಸವಾರಿ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ.

Share Post