ಸರ್ಕಾರ ಎಡವಿದೆ, ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ; ಬಸವರಾಜ ಬೊಮ್ಮಾಯಿ
ಬೆಂಗಳೂರು; ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ. ತಮಿಳುನಾಡಿಗೆ ನೀರು ಬಿಡಲಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸರ್ವಪಕ್ಷಗಳ ಸಭೆ ಬಳಿಕ ಮಾತನಾಡಿದ ಅವರು, ಕಾವೇರಿ ವಿವಾದದ ಸಂಬಂಧ ಮುಂದಿನ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇದೆ. ಏನಾಗುತ್ತೋ ಕಾದು ನೋಡೋಣ ಎಂದು ಹೇಳಿದ್ದಾರೆ.
ಸರ್ಕಾರಕ್ಕೆ ನಾವು ಸಲಹೆ, ಸೂಚನೆಗಳನ್ನು ಕೊಟ್ಟಿದ್ದೇವೆ. ಕೋರ್ಟ್‌ನಲ್ಲಿ ಸರಿಯಾಗಿ ಪ್ರಕ್ರಿಯೆ ನಡೆಸುವಂತೆ ಹೇಳಿದ್ದೇವೆ. ಜೊತೆಗೆ ಸಿದ್ದರಾಮಯ್ಯ ಅವರು ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಹೋಗೋಣ ಎಂದು ಹೇಳಿದ್ದಾರೆ ಎಂದು ಬೊಮ್ಮಾಯಿ ಹೇಳಿದರು. ಇನ್ನು ಇದೇ ವೇಳೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಹಿತ ಕಾಪಾಡಿದರೆ, ಸರ್ಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ಬೆಂಬಲ ನೀಡೋದಾಗಿ ಹೇಳಿರುವುದಾಗಿ ತಿಳಿಸಿದ್ದಾರೆ. ಜೊತೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದ ಮಂಡನೆ ಮಾಡಬೇಕೆಂದು ತಿಳಿಸಿದ್ದೇನೆ ಎಂದಿದ್ದಾರೆ.