ಸರ್ಕಾರಕ್ಕೆ ಮಧ್ಯರಾತ್ರಿಯಲ್ಲಿ ಜ್ಞಾನೋದಯವಾಗಿದೆ; ಮಾಜಿ ಸಿಎಂ ಕುಮಾರಸ್ವಾಮಿ
ಬೆಂಗಳೂರು; ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಬಿಜೆಪಿಯ ಸಾಧನಾ ಸಮಾವೇಶ ರದ್ದುಗೊಳಿಸಿದ್ದನ್ನು ಹೆಚ್ಡಿಕೆ ಸ್ವಾಗತಿಸಿದ್ದಾರೆ. ಹಾಗಾದರೆ ಕುಮಾರಸ್ವಾಮಿ ಟ್ವೀಟ್ನಲ್ಲಿ ಏನಿದೆ..? ಇಲ್ಲಿದೆ ವಿವರ..
ಟ್ವೀಟ್-೧
ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ. ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ.
ಟ್ವೀಟ್-೨
ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ?
ಟ್ವೀಟ್-೩
ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ.. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ.
ಟ್ವೀಟ್-೪
ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ @BJP4Karnataka ಸರಕಾರ ಮೈಮರೆತಿದ್ದು ಯಾಕೆ?
ಟ್ವೀಟ್-೫
ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ.
ಟ್ವೀಟ್-೬
ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು.