Bengaluru

ಪದವಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಲು ಚಿಂತನೆ; ಸಿದ್ದರಾಮಯ್ಯ

ಬೆಂಗಳೂರು; ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಪದವಿ ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್‌ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯಲ್ಲಿ ಸಿಎಂ ಈ ಬಗ್ಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸ್ಥಗಿತಗೊಂಡಿರುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಯೋಜನೆಯನ್ನು ಪುನಾರಂಭಿಸುವಂತೆಯೂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಎಸ್‌ಸಿ ವಿದ್ಯಾರ್ಥಿಗಳಿಗೆ ಮತ್ತು ಬುಡಕಟ್ಟು ಉಪ ಯೋಜನೆ ಅಡಿಯಲ್ಲಿ ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವಂತೆ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇದಕ್ಕಾಗಿ 230 ಕೋಟಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಗೆ ಸೂಚನೆಯನ್ನೂ ಕೊಟ್ಟಿದ್ದಾರೆ. ಜಾತಿ, ಧರ್ಮದ ಭೇದವಿಲ್ಲದೇ ಪದವಿ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಬೇಕೆಂದು ಚಿಂತನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇದಕ್ಕಾಗಿ ಯೋಜನೆ ಸಿದ್ಧಪಡಿಸುತ್ತೇವೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

Share Post