ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದಬೇಕು; ಸಚಿವ ಮಹದೇವಪ್ಪ
ಬೆಂಗಳೂರು; ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ಓದಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
ಇಲಾಖೆಯ ಅಧಿಕಾರಿಗಳ ಸಬೆ ನಡೆಸಿರುವ ಸಚಿವರು, ಈ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಾರೆ. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸಬೇಕು. ಇದಕ್ಕೆ ಪೂರಕವಾಗಿ ಅಧಿಕಾರಿಗಳು ಆದೇಶ ಹೊರಡಿಸಬೇಕೆಂದು ಸೂಚನೆ ನೀಡಿದ್ದಾರೆ. ಈ ವಿಚಾರವನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಪ್ರಕಟಿಸಲಾಗಿದೆ.