ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಮತ್ತೆ 100 ರೂ. ಏರಿಕೆ
ನವದೆಹಲಿ; ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇಂದಿನಿಂದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿ ಏರಿಕೆ ಮಾಡಲಾಗಿದೆ.
ಸರ್ಕಾರಿ ಒಡೆತನದ ತೈಲ ಮಾರುಕಟ್ಟೆ ಕಂಪನಿಗಳು ಈ ಹೊಸ ದರ ಜಾರಿ ಮಾಡಿವೆ. ಇದರಿಂದಾಗಿ 19 ಕೆ.ಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಈಗ ದೆಹಲಿಯಲ್ಲಿ 1,731 ರೂ. ನಿಂದ 1,833 ರೂ., ಮುಂಬೈನಲ್ಲಿ 1,785.50 ರೂ., ಕೋಲ್ಕತ್ತಾದಲ್ಲಿ ರೂ.1,943 ಮತ್ತು ಚೆನ್ನೈನಲ್ಲಿ ಪ್ರತಿ ಸಿಲಿಂಡರ್ ಗೆ ರೂ.1,999.50 ರೂಪಾಯಿ ಆಗಿದೆ. ಆದ್ರೆ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.