ಜೇಮ್ಸ್ ನಿರ್ಮಾಪಕ ಕಿಶೋರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ಬೆಂಗಳೂರು; ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಸಂಜೆ ಬಿಪಿ ಹೆಚ್ಚಾದ ಕಾರಣದಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಇದೇ ವೇಳೆ ಅವರಿಗೆ ಸ್ಟ್ರೋಕ್ ಕೂಡಾ ಆಗಿದೆ ಎಂದು ಹೇಳಲಾಗುತ್ತಿದೆ.
ನಿರ್ಮಾಪಕ ಕಿಶೋರ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿರುವುದರಿಂದ ಯಾರೂ ಆತಂಕ ಪಡಬೇಕಿಲ್ಲ ಎಂದಿದ್ದಾರೆ. ಪುನೀತ್ ರಾಜ್ ಕುಮಾರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿರುವ ಕಿಶೋರ್ ಪತ್ತಿಕೊಂಡ, ಮೊದಲ ಸಿನಿಮಾದಲ್ಲೇ ಗೆಲುವು ಕಂಡವರು. ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದರು.