ರಾಜ್ಯ ಸರ್ಕಾರ ಎಡವಟ್ಟಿನ ಸರ್ಕಾರ; ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು; ಆಡಳಿತ ನಿರ್ವಹಣೆ ಮಾಡುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ಸಿ.ಎನ್.ಅಶ್ವತ್ಥನಾರಾಯಣ್ ಆರೋಪ ಮಾಡಿದ್ದಾರೆ. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಎಡವಟ್ಟುಗಳ ಸರ್ಕಾರವಾಗಿದೆ. ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಿಂದ ಬರೀ ಎಡವಟ್ಟುಗಳೇ ಆಗುತ್ತಿವೆ. ಐಟಿ ದಾಳಿ ಸಂಬಂಧ ಸಿಬಿಐ ತನಿಖೆ ಮಾಡಿ ಹಣದ ಮೂಲವನ್ನು ಪತ್ತೆ ಮಾಡಬೇಕು ಎಂದು ಅಶ್ವತ್ಥನಾರಾಯಣ್ ಆಗ್ರಹಿಸಿದರು