BengaluruPolitics

ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ; ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌

ಬೆಂಗಳೂರು; ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಹೇಳಿದ್ದಾರೆ. ವಿಧಾನಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಜನ ಕಾಂಗ್ರೆಸ್‌ಗೆ ಅಭೂತಪೂರ್ವ ಬಹುಮತ ನೀಡಿದ್ದಾರೆ ಎಂದಿದ್ದಾರೆ.

ಎಲ್ಲಾ ಸಮುದಾಯಗಳ ಪರವಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಬಸವಣ್ಣ ಸೇರಿ ಅನೇಕ ಸಂತರ ಶಾಂತಿಯ ಪಾಲನೆ ಮಾಡಲಾಗುತ್ತಿದೆ. ಜನಕಲ್ಯಾಣಕ್ಕೆ ರಾಜ್ಯ ಸರ್ಕಾರ ಶ್ರಮಿಸಲಿದೆ. ಸಮ ಸಮಾಜದ ನಿರ್ಮಾಣಕ್ಕೆ ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ರಾಜ್ಯಪಾಲರು ಹೇಳಿದರು. ರಾಜ್ಯ ಸರ್ಕಾರ ಐದು ಗ್ಯಾರೆಂಟಿಗಳನ್ನು ಘೋಷಣೆಗಳನ್ನು ಅನುಷ್ಠಾನ ಮಾಡಿದೆ. ಪ್ರತಿ ಮನೆಗೂ ೨೦೦ ಯೂನಿಟ್‌ವರೆಗೂ ವಿದ್ಯುತ್‌, ಮನೆಯ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ ಎಂದು ರಾಜ್ಯಪಾಲ ಥಾವರ್‌ ಚಂದ್ರ ಗೆಹ್ಲೋಟ್‌ ಹೇಳಿದರು.

ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಶ್ರಮಿಸಲಿದೆ. ರೈತರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಉತ್ತಮ ಕೆಲಸ ಮಾಡಲಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಶ್ರಮಿಸಲಿದೆ ಎಂದು ರಾಜ್ಯಪಾಲರು ಹೇಳಿದರು.

Share Post