BengaluruPolitics

ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು; ಯಡಿಯೂರಪ್ಪ

ಬೆಂಗಳೂರು; ಕಾವೇರಿ ವಿಚಾರವಾಗಿ ನಾವು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕಾಗಿದೆ. ಇಲ್ಲಿಗೆ ತಜ್ಞರ ತಂಡವನ್ನು ಕಳುಹಿಸಿ ಕೊಟ್ಟರೆ ವಸ್ತು ಸ್ಥಿತಿ ಅವರಿಗೂ ಅರ್ಥವಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕಾವೇರಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ವಾದ ಮಂಡಿಸುವ ಅಗತ್ಯತೆ ಇದೆ ಎಂದು ಹೇಳಿದರು.

ಇನ್ನು ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕೆಂಬ ಆಗ್ರಹ ಬಗ್ಗೆ ಮಾತನಾಡಿದ ಯಡಿಯೂರಪ್ಪ, ಈಗಾಗಲೇ ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಯಲ್ಲಿ ಮಾತನಾಡಿದ್ದಾರೆ. ದೆಹಲಿ ನಾಯಕರ ಜೊತೆ ಚರ್ಚೆ ಮಾಡಿದ್ದಾರೆ. ಎಲ್ಲರೂ ಕೂಡಾ ರಾಜ್ಯ ಪರವಾಗಿಯೇ ಇದ್ದೇವೆ ಎಂದು ಹೇಳಿದರು.

 

Share Post