BengaluruPolitics

ರಾಜ್ಯವನ್ನು ಕಾಂಗ್ರೆಸ್‌ ಮಿನಿ ಪಾಕಿಸ್ತಾನ ಮಾಡುತ್ತಿದೆ; ಆರ್‌.ಅಶೋಕ್‌ ಕಿಡಿ

ಬೆಂಗಳೂರು; ಕಾಂಗ್ರೆಸ್ ಪಕ್ಷ ಕರ್ನಾಟಕ ರಾಜ್ಯವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಂತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಆರೋಪಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಟಿಪ್ಪುವಿನ ಮತಾಂತರದ ಸಿದ್ಧಾಂತಕ್ಕೆ ಪೂರಕವಾಗಿ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಪಿಎಫ್‍ಐ, ಕೆಎಫ್‍ಡಿ ಪರವಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಈ ರೀತಿ ಜನಾದೇಶದ ದುರ್ಬಳಕೆಗೆ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದ ಆರ್‌.ಅಶೋಕ್‌, ರಾಜ್ಯದಲ್ಲಿ ನೀವು ಯಾರ ಪರ ಇದ್ದೀರಿ? ಎಂದು ಕೇಳಿದರು. 30ರಿಂದ 40 ಲಕ್ಷಕ್ಕೂ ಹೆಚ್ಚು ಹಿಂದೂಗಳು ದುಡ್ಡಿನ ಆಮಿಷ, ಲವ್ ಜಿಹಾದ್, ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ಆಗದೆ ಮತಾಂತರ ಆದ ಮಾಹಿತಿ ಇದೆ. ಕಾಂಗ್ರೆಸ್ ಯಾರಿಗಾಗಿ ಈ ಕಾಯ್ದೆಗೆ ತಿದ್ದುಪಡಿ ತರುತ್ತಿದೆ? ಎಂದರು. ಬಲವಂತದ ಮತಾಂತರ ಸಲ್ಲದು ಎಂಬ ಭಾವನೆ ಹಾಗೂ ನಿಲುವನ್ನು ಮಹಾತ್ಮ ಗಾಂಧೀಜಿ ಮತ್ತು ಡಾ. ಅಂಬೇಡ್ಕರ್ ಅವರು ಹೊಂದಿದ್ದರು ಎಂದು ವಿವರಿಸಿದರು. ಮತಾಂತರ ಆಗುವುದಾದರೆ ಕಾನೂನು ಪ್ರಕಾರ ಆಗಬೇಕೆಂಬ ನಮ್ಮ ಕಾಯ್ದೆಯಲ್ಲಿ ತಪ್ಪೇನಿದೆ? ಎಂದು ಕೇಳಿದರು.

ಟಿಪ್ಪು ಕೊಡಗಿನಲ್ಲಿ 50ರಿಂದ 60 ಸಾವಿರ ಜನರನ್ನು ಮತಾಂತರ ಮಾಡಿದ್ದ. ಆತನನ್ನು ವೈಭವೀಕರಿಸಿ ಅವನ ಜಯಂತಿ ಮಾಡಿದರು. ಗಲಭೆಗೆ ಕಾರಣರಾದರು ಎಂದು ಟೀಕಿಸಿದ ಅವರು, ಈ ಕಾಯ್ದೆ ವಾಪಸ್ ಪಡೆಯಬಾರದು ಎಂದು ಬಿಜೆಪಿ ಆಗ್ರಹಿಸುತ್ತದೆ ಎಂದರು. ಮತಬ್ಯಾಂಕಿಗಾಗಿ, ಒಂದು ಸಮುದಾಯದವರನ್ನು ಓಲೈಸಲು ಈ ಕಾಯ್ದೆ ಹಿಂದಕ್ಕೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಓಟಿಗೋಸ್ಕರ ಯಾವ ಹಂತಕ್ಕಾದರೂ ಹೋಗುತ್ತದೆ ಎಂದು ವ್ಯಂಗ್ಯವಾಡಿದರು. ಹಿಂದೆ ರೈತರು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಎಪಿಎಂಸಿ ಆರಂಭವಾಗಿತ್ತು. ಅದೊಂದು ರೀತಿಯ ಗುತ್ತಿಗೆ ಕೊಡುವ ಪ್ರಯತ್ನ. ದಲ್ಲಾಳಿಗಳು ಗೇಟಿನಲ್ಲೇ ನಿಂತು ಖರೀದಿಸಿ ಲಾಭ ಮಾಡುವ ವ್ಯವಸ್ಥೆ ಅದು. ನಾವು ಮಾಡಿದ ತಿದ್ದುಪಡಿಯಡಿ ದೇಶದ ಎಲ್ಲಿ ಬೇಕಾದರೂ ಮಾರಾಟ ಮಾಡುವ ಅವಕಾಶ ಇದೆ. ರೈತರಿಗೆ ಸಾವಿರಾರು ಕೋಟಿ ಆದಾಯ ಸಿಗಬೇಕೇ? ಅಥವಾ ಎಪಿಎಂಸಿಗೆ ಲಾಭ ಆಗಬೇಕೇ? ದಲ್ಲಾಳಿಗಳ ಲಾಭ ಹೆಚ್ಚಬೇಕೇ? ಎಂದು ಕೇಳಿದರು.

Share Post