ಸರ್ಕಾರದಲ್ಲಿ ಕಪ್ಪು ಚುಕ್ಕೆಗಳು ಕಾಣಿಸುತ್ತಿವೆ, ಕಿವಿ ಹಿಂಡುತ್ತೇನೆ; ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು; ವಿಪಕ್ಷ ನಾಯಕನಾಗಿ ಆಯ್ಕೆಯಾಗಿರುವ ಆರ್.ಅಶೋಕ್ ಅವರು ಇಂದು ವಿಧಾನಸೌಧದಲ್ಲಿ ಅವರ ಕಚೇರಿಗೆ ಪೂಜೆ ಸಲ್ಲಿಸಿ, ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಆರು ತಿಂಗಳಿಂದ ಏನನ್ನೂ ಮಾಡಿಲ್ಲ. ಅನೇಕ ಕಪ್ಪು ಚುಕ್ಕೆಗಳು ಕಾಣಿಸುತ್ತಿವೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ಮರೆತಿದೆ. ಅನೇಕ ತಪ್ಪುಗಳು ನಡೆದಿವೆ. ಹೀಗಾಗಿ ಸದನದಲ್ಲಿ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ಅದಕ್ಕೂ ಬಗ್ಗದೇ ಹೋದರೆ ಹೋರಾಟ ತೀವ್ರ ಮಾಡುತ್ತೇವೆ. ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮುಳುಗಿದ್ದು, ಇದರ ವಿರುದ್ಧ ಹೋರಾಟ ಮಾಡುವುದಾಗಿ ಆರ್.ಅಶೋಕ್ ಹೇಳಿದ್ದಾರೆ.