Bengaluru

ನಾಳೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ಇಲ್ಲ

ಬೆಂಗಳೂರು; ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ನಿಧನದ ಹಿನ್ನೆಲೆಯಲ್ಲಿ ನಾಳೆ ದೊಡ್ಡ ಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಮುಂದೂಡಲಾಗಿದೆ. ಭಾನುವಾರ ಜನೋತ್ಸವ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.

ಈಗಾಗಲೇ ಜನೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳೂ ನಡೆದಿದ್ದವು. ಜರನ್ನು ಕರೆದುಕೊಂಡು ಬರಲು ಸುಮಾರು ಎರಡು ಸಾವಿರ ಬಸ್‌ಗಳನ್ನು ನಿಯೋಜಿಸಲಾಗಿತ್ತು. ಆದ್ರೆ, ಸಚಿವ ಉಮೇಶ್‌ ಕತ್ತಿ ನಿಧನದ ಹಿನ್ನೆಲೆಯಲ್ಲಿ ಜನೋತ್ಸವವನ್ನು ಭಾನುವಾರ ನಡೆಸಲು ತೀರ್ಮಾನಿಸಲಾಗಿದೆ. ಈ ಹಿಂದೆಯೂ ಕೂಡಾ ದೊಡ್ಡ ಮಟ್ಟದಲ್ಲಿ ಇದೇ ದೊಡ್ಡ ಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದ್ರೆ ಹಿಂದಿನ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಯಾಯಿತು. ಈ ಕಾರಣದಿಂದಾಗಿ ಜನೋತ್ಸವವನ್ನು ಮುಂದೂಡಲಾಗಿತ್ತು.

Share Post