ಮತದಾನಕ್ಕೆ ಹೋಗಲು ಬಸ್ ಸಿಗ್ತಿಲ್ಲ; ಮೆಜೆಸ್ಟಿಕ್ನಲ್ಲಿ ಜನ ಪರದಾಟ
ಬೆಂಗಳೂರು; ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕಾಗಿ ಮತದಾನ ಮಾಡಲು ಹಳ್ಳಿಗಳಿಗೆ ಬೆಂಗಳೂರಿನಲ್ಲಿ ನೆಲೆಸಿರುವ ಜನ ತೆರಳುತ್ತಿದ್ದಾರೆ. ಆದ್ರೆ ಅವರಿಗೆ ಬಸ್ ವ್ಯವಸ್ಥೆ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಮೆಜೆಸ್ಟಿಕ್ನಲ್ಲಿ ಸಾವಿರಾರು ಜನ ಸೇರಿದ್ದು ಕೆಎಸ್ಆರ್ಟಿಸಿ ಬಸ್ಗಳಿಲ್ಲದೆ ಗಂಟೆಗಟ್ಟಲೆ ಕಾಯುವಂತಾಗಿದೆ. ಇತ್ತ ಖಾಸಗಿ ಬಸ್ನವರು ನಾಲ್ಕು ಪಟ್ಟು ಹೆಚ್ಚು ಹಣ ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ರಾಜ್ಯದಲ್ಲಿ ಒಟ್ಟು 8100 ಕೆಎಸ್ಆರ್ಟಿಸಿ ಬಸ್ಗಳಿವೆ. ಅದರಲ್ಲಿ 3500 ಬಸ್ಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಬಸ್ ಸಿಗುತ್ತಿಲ್ಲ. ಕೇಂದ್ರ ಸರ್ಕಾರ ಕೆಲ ಟ್ರೈನ್ಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಿದ್ದರೂ ಪ್ರಯಾಣಿಕರು ಪರದಾಟ ತಪ್ಪಿಲ್ಲ. ಕಾರಣ ರಾಜ್ಯದ ಹಲವಾರು ಕಡೆಗೆ ಟ್ರೈನ್ ವ್ಯವಸ್ಥೆ ಇಲ್ಲ. ಬಸ್ನಲ್ಲೇ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಇದೆ. ಆದ್ರೆ ಬಸ್ಗಳು ಚುನಾವಣಾ ಕರ್ತವ್ಯಕ್ಕೆ ಹೋಗಿರುವುದರಿಂದ ಜನರು ಪರದಾಡುತ್ತಿದ್ದಾರೆ.