ತೈಲ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣವಲ್ಲ; ಸದಾನಂದಗೌಡ
ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಹಿಂದೆ ಕೇಂದ್ರ ಸರ್ಕಾರದ ಪಾತ್ರ ಎಳ್ಳಷ್ಟೂ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ವಿರೋದ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣ ಅಲ್ಲ ಎಂದು ಹೇಳಿದ್ದಾರೆ.
ತೈಲ ಬೆಲೆ ಏರಿಕೆಗೆ ಈ ಹಿಂದೆ ಅಧಿಕಾರದಲ್ಲಿದ್ದ ಸರ್ಕಾರದ ಕರ್ಮಕಾಂಡವೇ ಇದಕ್ಕೆ ಕಾರಣ ಎಂದಿರುವ ಸದಾನಂದ ಗೌಡರು, ಹಿಂದಿನ ಸರ್ಕಾರದ ತಪ್ಪು ನೀತಿಯಿಂದಾಗಿ ತೈಲ ಕಂಪನಿಗಳೇ ತಾವೇ ಬೆಲೆ ನಗದಿ ಮಾಡುವಂತಾಗಿದೆ ಎಂದು ಆರೋಪಿಸಿದರು.