Bengaluru

ನಾಳೆ ಬೆಂಗಳೂರಿಗೆ ಮೋದಿ; ಕೆಲ ರಸ್ತೆಗಳಲ್ಲಿ ಸಂಚಾರ ಬಂದ್‌, ಬದಲಿ ಮಾರ್ಗ ಏನು..?

ಬೆಂಗಳೂರು; ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ ಉದ್ಘಾಟನೆಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕೆಲ ರಸ್ತೆಗಳು ಬಂದ್‌ ಆಗಲಿವೆ. ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದ್ದು, ಈ ಮಾರ್ಗದಲ್ಲಿ ಓಡಾಡುವವರಿಗೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

ನಾಳೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಕೆಲ ರಸ್ತೆಗಳು ಬಂದ್‌ ಆಗಲಿವೆ. ಈ ರಸ್ತೆಗಳಲ್ಲಿ ಓಡಾಡುವವರಿಗೆ ಬದಲಿ ಮಾರ್ಗಗಳೇನು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ಯಾವ ರಸ್ತೆಗಳಲ್ಲಿ ವಾಹನ ಸಂಚಾರ ಇಲ್ಲ..?
೧. ಸಿಟಿಓ ಜಂಕ್ಷನ್, ರಾಜಭವನ ರಸ್ತೆ, ರೇಸ್ ಕೋರ್ಸ್ ರಸ್ತೆ, ಬಸವೇಶ್ವರ ಸರ್ಕಲ್​, ಪ್ಯಾಲೇಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಮತ್ತು ಏರ್ ಪೋರ್ಟ್ ಎಲಿವೇಟೆಡ್ ಕಾರಿಡಾರ್ ರಸ್ತೆ
೨. ಶೇಷಾದ್ರಿ ರಸ್ತೆಯ ಮಹಾರಾಣಿ ಬ್ರಿಡ್ಜ್ ನಿಂದ ರೈಲ್ವೆ ಸ್ಟೇಷನ್ ಪ್ರವೇಶ ದ್ವಾರದವರೆಗಿನ ರಸ್ತೆ ಬಂದ್​
೩. ಕೆ.ಜಿ ರಸ್ತೆಯ ಶಾಂತಲಾ ಜಂಕ್ಷನ್​​ನಿಂದ ಮೈಸೂರು ಬ್ಯಾಂಕ್‌ ಸರ್ಕಲ್ ವರೆಗಿನ ರಸ್ತೆ ಬಂದ್​
೪. ವಾಟಾಳ್ ನಾಗರಾಜ್ ರಸ್ತೆಯ ಕೋಡೆ ಅಂಡರ್ ಪಾಸ್​​ನಿಂದ ಪಿ.ಎಫ್ ವರೆಗಿನ ರಸ್ತೆ ಬಂದ್​
೫. ಏ‌ಪೋರ್ಟ್‌ನ ಸುತ್ತ ಮತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ

ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳೇನು..?

೧. ಕೆ.ಜಿ. ರಸ್ತೆ ಮೂಲಕ ಎಲ್‌.ಆರ್‌.ಡಿ.ಇ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಹೋಗುವವರು ರಾಜಭವನ ರಸ್ತೆ ಮೂಲಕ ಸಾಗಬೇಕು.
೨. ಟ್ರಿಲೈಟ್ ಜಂಕ್ಷನ್​ನಿಂದ ಮೌರ್ಯ ಜಂಕ್ಷನ್ ಮೂಲಕ ಬರುವವರು ರೇಸ್‌ ವ್ಯೂವ್ ಸರ್ಕಲ್‌ನಲ್ಲಿ – ಶಿವಾನಂದ ಸರ್ಕಲ್‌ನಲ್ಲಿ ಎಡತಿರುವು ಪಡೆದು ನೆಹರು ಸರ್ಕಲ್ ಮೂಲಕ ಹೋಗಬಹುದು
೩. ಕೆಕೆ ರಸ್ತೆ ಮೂಲಕ ವಿಂಡ್ಸ್‌ ಮ್ಯಾನರ್ ವೃತ್ತಕ್ಕೆ ತೆರಳುವ ವಾಹನ ಸವಾರರು ಶಿವಾನಂದ ಸರ್ಕಲ್‌ನಲ್ಲಿ-ನೆಹರು ಸರ್ಕಲ್‌ ಮೂಲಕ ಹೋಗಬಹುದು.
೪. ಬಿಹೆಚ್‌ ಇಎಲ್ ಸರ್ಕಲ್‌ನಿಂದ ಮೇಕ್ರಿ ಸರ್ಕಲ್ ಕಡೆಗೆ ಬರುವ ವಾಹನ ಸವಾರರು ಸದಾಶಿವನಗರ ಪೊಲೀಸ್ ಠಾಣೆ – ಮಾರಮ್ಮ ಸರ್ಕಲ್ – ಮಾರ್ಗೋಸ ರಸ್ತೆ ಮೂಲಕ‌ ಸಂಚರಿಸಬಹುದು
೫. ಭಾಷ್ಯಂ ಸರ್ಕಲ್‌ನಿಂದ ಕಾವೇರಿ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಮಲ್ಲೇಶ್ವರಂ 18ನೇ ಕ್ರಾಸ್ – ಮಾರ್ಗೋಸ ರಸ್ತೆಯ ಮೂಲಕ ಹೋಗಬಹುದು.

Share Post