Bengaluru

ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ವಾರಕ್ಕೊಮ್ಮೆ ಅಥವಾ ಆಗಾಗ ಜನತಾ ದರ್ಶನ ನಡೆಸೋದಕ್ಕೆ ನೋಡಿದ್ದೇವೆ. ಆದ್ರೆ ಈ ವೇಳೆ ಜನರು ಖಾತೆ ಬದಲಾವಣೆ, ಟ್ರಾನ್ಸ್‌ಫಾರ್ಮರ್‌ ಬದಲಾವಣೆಯಂತಹ ಸಣ್ಣ ಪುಟ್ಟ ವಿಚಾರಗಳನ್ನೂ ಸಿಎಂ ಗಮನಕ್ಕೆ ತರುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರು ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ ನಡೆಸಿ, ಸ್ಥಳದಲ್ಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚನೆ ಕೊಟ್ಟಿದ್ದಾರೆ. ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ ನಡೆಯಲಿದೆ.

ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್‌ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಜನತಾ ದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಇಂದಿನ ಈ ಕಾರ್ಯಕ್ರಮದ ಬಳಿಕ ಪ್ರತಿ ಹದಿನೈದು ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ಆ ತಾಲ್ಲೂಕಿನಲ್ಲಿ ಜನತಾ ದರ್ಶನ ಮಾಡಬೇಕೆಂದು ಸೂಚನೆ ಕೊಟ್ಟಿದ್ದಾರೆ.

Share Post