BengaluruPolitics

ಪಕ್ಷಕ್ಕೆ ಬರುವವರನ್ನು ಸ್ವಾಗತಿಸುತ್ತೇವೆ; ಸಿದ್ದರಾಮಯ್ಯ

ಬೆಂಗಳೂರು; ರಾಜ್ಯದಲ್ಲಿ ಹಲವಾರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಇಲ್ಲ. ಕಾಂಗ್ರೆಸ್‌ಗೆ ಪ್ರತಿಕ್ಷೇತ್ರದಲ್ಲಿ ಹತ್ತರಿಂದ ಹನ್ನೆರಡು ಗೆಲ್ಲುವ ಅಭ್ಯರ್ಥಿಗಳಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಪಕ್ಷಕ್ಕೆ ಬರುವವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

 

ಸಿದ್ದರಾಮಯ್ಯ ಟ್ವೀಟ್‌ಗಳಲ್ಲೇನಿದೆ..?

 

ಟ್ವೀಟ್‌-೧

ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ, 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ @BSBommai ಅವರು ಮತ್ತು @BJP4Karnataka ಪಕ್ಷ ಏನೇ ಹೇಳಲಿ ಸ್ಪಷ್ಟಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ.

ಟ್ವೀಟ್‌-೨

ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ 10-12 ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಇದೇ ಸಮಸ್ಯೆಯಾಗಿದೆ. ಈ ಸಮಸ್ಯೆ ಬಿಜೆಪಿಗೆ ಇಲ್ಲ. ಅದು ನಮ್ಮಂತೆ ಇಡೀ ರಾಜ್ಯದಲ್ಲಿ ನೆಲೆ ಇರುವ ಪಕ್ಷ ಅಲ್ಲ. ಇದಕ್ಕಾಗಿ ನಮ್ಮಲ್ಲಿ ಗೆದ್ದವರನ್ನು ಆಪರೇಷನ್ ಕಮಲ ಮಾಡಿ @BJP4Karnataka ಅವರು ಹೊತ್ತುಕೊಂಡು ಹೋಗುತ್ತಾರೆ.

ಟ್ವೀಟ್‌-೩

ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಖಂಡಿತಾ ಇದೆ. ಉದಾಹರಣೆಗೆ ಹುಣಸೂರಿನಲ್ಲಿ @BJP4Karnataka  ಅಭ್ಯರ್ಥಿ ಯಾರು? ವಿಶ್ವನಾಥ್ ಈಗ ಪರಿಷತ್ ಸದಸ್ಯರಾಗಿದ್ದಾರೆ. ಕೆ.ಆರ್ ನಗರದಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ಯಾರಿದ್ದಾರೆ? ಇಡೀ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ.

ಟ್ವೀಟ್‌-೪

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ. ಚುನಾವಣೆಗೆ 9 ತಿಂಗಳು ಇದೆ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ಪಕ್ಷದ ನಾಯಕತ್ವ ಒಪ್ಪಿಕೊಂಡು, ಪಕ್ಷಕ್ಕೆ ನಿಷ್ಠಾವಂತರಾಗಿ ಇರುವವರಿಗೆ ಟಿಕೇಟ್ ನೀಡುತ್ತೇವೆ.

ಟ್ವೀಟ್‌-೫

ಬಿಜೆಪಿಯಲ್ಲಿರುವವರೆಲ್ಲರೂ ಆರ್.ಎಸ್.ಎಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ.

ಟ್ವೀಟ್‌-೬

ನಾನೆಂದೂ ಹುಟ್ಟುಹಬ್ಬವನ್ನು ಬಹಿರಂಗವಾಗಿ ಆಚರಿಸಿದವನಲ್ಲ, ಈ ಬಾರಿ 75 ವರ್ಷ ಪೂರ್ಣಗೊಳಿಸಲಿರುವ ಕಾರಣ ಸ್ನೇಹಿತರು ಮತ್ತು ಅಭಿಮಾನಿಗಳು ಆಚರಣೆ ಮಾಡುತ್ತಿದ್ದಾರೆ. ನಮ್ಮ ನಾಯಕರಾದ @RahulGandhi

ಅವರೇ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಕಾರಣ ವಿಶೇಷ ಸಂದರ್ಭವಾಗಿದ್ದು ನಾನೂ ಭಾಗವಹಿಸುತ್ತಿದ್ದೇನೆ.

Share Post