BengaluruCrime

ಬೆಂಗಳೂರಿನಲ್ಲಿ ಮೂವರು ಡ್ರಗ್‌ ಪೆಡ್ಲರ್‌ಗಳ ಬಂಧನ

ಬೆಂಗಳೂರು; ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಮೂವರು ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ವಿದ್ಯಾರಣ್ಯಪುರದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಓರ್ವ ರೌಡಿಶೀಟರ್‌ ಸೇರಿ ಮೂವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ೧೦ ಲಕ್ಷ ಮೌಲ್ಯದ ಎಂಡಿಎಂಎ ಮಾತ್ರೆಗಳು, ಆರು ಕೆಜಿ ಗಾಂಜಾ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಅವರಿಗೆ ಡ್ರಗ್ಸ್‌ ಮಾರಾಟ ಮಾಡಲಾಗುತ್ತಿತ್ತೆಂದು ತಿಳಿದುಬಂದಿದೆ. ಶೇಖ್‌ ಸಲ್ಮಾನ್‌, ಶಫೀಕ್‌, ಸಲ್ಮಾನ್‌ ಫಾರಿಸ್‌ ಬಂಧಿತ ಆರೋಪಿಗಳು.

 

Share Post