BengaluruPolitics

ಮೂವರು ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರ್ತಿದ್ದಾರೆ; ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು; ಮೂವರು ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರುತ್ತೇವೆ ಎಂದು ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಆಪರೇಷನ್‌ ಹಸ್ತ ಮಾಡುವ ಅವಶ್ಯಕತೆಯೇ ಇಲ್ಲ. ಜೆಡಿಎಸ್‌, ಬಿಜೆಪಿಯಿಂದ ಬೇಸತ್ತು ಅವರೇ ಕಾಂಗ್ರೆಸ್‌ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

ಜೆಡಿಎಸ್‌-ಬಿಜೆಪಿ ಮೈತ್ರಿ ಬೆನ್ನಲ್ಲೇ ಎರಡೂ ಪಕ್ಷದ ಹಲವಾರು ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಅನೇಕರು ಕಾಂಗ್ರೆಸ್‌ ಸೇರುವ ಬಗ್ಗೆ ಒಲವು ತೋರಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲೂ ಹಲವರು ಕಾಂಗ್ರೆಸ್‌ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ಯಾರನ್ನು ಪಕ್ಷಕ್ಕೆ ಕರೆಯುತ್ತಿಲ್ಲ. ಅವರೇ ಕಾಂಗ್ರೆಸ್‌ಗೆ ಬರುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

 

Share Post