Bengaluru

ಹಿಜಾಬ್‌ ವಿವಾದ ಹೈಕೋರ್ಟ್‌ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ

ಬೆಂಗಳೂರು:  ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿರುವ ಹಿಜಾಬ್‌ ವಿವಾದ ಹೈಕೋರ್ಟ್‌ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಮುಖ್ಯ ನ್ಯಾಯಮೂರ್ತಿಯನ್ನೊಳಗೊಂಡಂತೆ ತ್ರಿಸದಸ್ಯ(3judges bench) ಪೀಠದಲ್ಲಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.  ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾ. ಕೃಷ್ಣ ಎಸ್. ದೀಕ್ಷಿತ್. ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರನ್ನು ಒಳಗೊಂಡಿರುವ ತ್ರಿಸದಸ್ಯ ಪೀಠ ರಚನೆಯಾಗಿದೆ. ನಿನ್ನೆ ಸಂಜೆ  ವಿಶೇಷ ಪೂರ್ಣ ಪೀಠ ರಚನೆ ಮಾಡಿ ಆದೇಶ ನೀಡಲಾಗಿತ್ತು.

ಹಿಜಾಬ್ ವಿವಾದ ಅರ್ಜಿ ಪ್ರಕರಣವನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಮುಖ್ಯ ನ್ಯಾಯಮೂರ್ತಿಗಳಿಗೆ(Chief judge) ವರ್ಗಾವಣೆ ಮಾಡಲಾಗಿತ್ತು. ವಿಸ್ತೃತ ಪೀಠ ರಚನೆ ಮುಖ್ಯ ನ್ಯಾಯಮೂರ್ತಿಗಳು ನಿರ್ಧಾರ ಮಾಡಲಿ. ಈ ಪ್ರಕರಣ ವಿಸ್ತೃತ ಪೀಠದಲ್ಲಿ ವಿಚಾರಣೆಗೆ ಯೋಗ್ಯವಾಗಿದೆ. ಮುಖ್ಯನ್ಯಾಯಮೂರ್ತಿಗಳು ಈ ಬಗ್ಗೆ ವಿವೇಚನೆ ಹೊಂದಿದ್ದಾರೆ. ತಕ್ಷಣವೇ ಸಂಪೂರ್ಣ ಕಡತ ನ್ಯಾಯಾಮೂರ್ತಿಗಳಿಗೆ ಕಳಿಸಿಕೊಡಿ ಎಂದು ಹೈಕೋರ್ಟ್‌ ರಿಜಿಸ್ಟ್ರಾರ್‌ಗೆ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ನಿರ್ದೇಶನ ನೀಡಿದ್ರು. ಇದರ ಹಿನ್ನೆಲೆ ಮೂವರು ನ್ಯಾಯಮೂರ್ತಿಗಳ ಪೂರ್ಣ ಪ್ರಮಾಣದ ಪೀಠವನ್ನು ಮುಖ್ಯ ನ್ಯಾಯಮೂರ್ತಿಗಳು ರಚನೆ ಮಾಡಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.

 

Share Post