ಹಿಜಾಬ್ ವಿಚಾರಣೆಗೆ ತ್ರಿಸದಸ್ಯ ಪೀಠ:ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ರಚನೆ
ಬೆಂಗಳೂರು: ಹಿಜಾಬ್ ವಿವಾದ ಅರ್ಜಿ ಪ್ರಕರಣವನ್ನು ಇಂದು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿತ್ತು. ವಿಸ್ತೃತ ಪೀಠ ರಚನೆ ಮುಖ್ಯ ನ್ಯಾಯಮೂರ್ತಿಗಳು ನಿರ್ಧಾರ ಮಾಡಲಿ. ಈ ಪ್ರಕರಣ ವಿಸ್ತೃತ ಪೀಠದಲ್ಲಿ ವಿಚಾರಣೆಗೆ ಯೋಗ್ಯವಾಗಿದೆ. ಮುಖ್ಯನ್ಯಾಯಮೂರ್ತಿಗಳು ಈ ಬಗ್ಗೆ ವಿವೇಚನೆ ಹೊಂದಿದ್ದಾರೆ. ತಕ್ಷಣವೇ ಸಂಪೂರ್ಣ ಕಡತ ನ್ಯಾಯಾಮೂರ್ತಿಗಳಿಗೆ ಕಳಿಸಿಕೊಡಿ ಎಂದು ಹೈಕೋರ್ಟ್ ರಿಜಿಸ್ಟ್ರಾರ್‌ಗೆ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ನಿರ್ದೇಶನ ನೀಡಿದ್ರು. ಇದರ ಹಿನ್ನೆಲೆ ಮೂವರು ನ್ಯಾಯಮೂರ್ತಿಗಳ ಪೂರ್ಣ ಪ್ರಮಾಣದ ಪೀಠವನ್ನು ಮುಖ್ಯ ನ್ಯಾಯಮೂರ್ತಿಗಳು ರಚನೆ ಮಾಡಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಮೂವರು ನ್ಯಾಯಮೂರ್ತಿಗಳ ತ್ರಿಸದಸ್ಯ ಪೀಠ ರಚಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾ. ಕೃಷ್ಣ ಎಸ್. ದೀಕ್ಷಿತ್. ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರನ್ನು ಒಳಗೊಂಡಿರುವ ತ್ರಿಸದಸ್ಯ ಪೀಠ ರಚನೆ ಮಾಡಲಾಗಿದ್ದು, ವಿಶೇಷ ಪೂರ್ಣ ಪೀಠ ರಚನೆ ಮಾಡಿ ಆದೇಶ ನೀಡಲಾಗಿದೆ. ಫೆಬ್ರವರಿ 10 ಮಧ್ಯಾಹ್ನ 2.30ಕ್ಕೆ ಮತ್ತೆ ಹಿಜಾಬ್ ವಿವಾದದ ಅರ್ಜಿ ವಿಚಾರಣೆ ನಡೆಯಲಿದೆ.