ಸಂಜೆ ಆರು ಗಂಟೆಯಿಂದ ಬೆಳಗ್ಗೆ ೫ ಗಂಟೆವರೆಗೆ ನಗರದಲ್ಲಿ ನಿಷೇಧಾಜ್ಞೆ
ಬೆಂಗಳೂರು: ಕೋವಿಡ್‍ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಅನುಸರಿಸಿದೆ. ಇಂದು ಸಂಜೆ ೬ ಗಂಟೆಯಿಂದಲೇ ನಗರದಲ್ಲಿ
ಪೊಲೀಸರು ನಗರದ ಆಯಕಟ್ಟಿನ ಜಾಗಗಳೂ ಸೇರಿದಂತೆ ಎಲ್ಲೆಡೆ ಬಿಗಿಭದ್ರತೆ ಆಯೋಜಿಸಲಾಗಿದೆ. ಪ್ರಮುಖವಾಗಿ ಪ್ರತಿ ವರ್ಷ ಅದ್ಧೂರಿ ವರ್ಷಾಚರಣೆ ನಡೆಯುವ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ ಸೇರಿದಂತೆ ಆಯಕಟ್ಟಿನ ಜಾಗಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ನಗರಪೊಲೀಸ್ ಆಯುಕ್ತ ಕಮಲಪಂಥ್ ಅವರು ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆವರೆಗೂ ನಗರದಾದ್ಯಂತ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ ಮಾಡಲು ಅವಕಾಶವಿಲ್ಲ. ಪಾರ್ಕ್, ಮೈದಾನ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ.