Bengaluru

ರಾಜ್ಯದಲ್ಲಿ ಕೊರೊನಾ ಸಂಖ್ಯೆ ಇಳಿಮುಖ-12,009 ಪ್ರಕರಣ ದಾಖಲು, 50ಸಾವು

ಬೆಂಗಳೂರು: ಇಂದು ರಾಜ್ಯದಲ್ಲಿ 12,009 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಸೋಂಕಿಗೆ ಇಂದು ಒಟ್ಟು 50ಮಂದಿ ಸಾವನ್ನಪ್ಪಿದ್ದಾರೆ.  ರಾಜ್ಯದಲ್ಲಿ ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1,09,203ರಷ್ಟಿದೆ. ಒಂದೇ ದಿನ 25,854 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್ ಒಟ್ಟು ಪ್ರಕರಣಗಳ ಸಂಖ್ಯೆ 38,87‌,733ಕ್ಕೆ ಏರಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 39,300ರಷ್ಟಿದೆ.

ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 9.04ರಷ್ಟಿದೆ. ಮರಣ ಪ್ರಮಾಣ ಶೇಕಡ 0.41ರಷ್ಟಿದೆ. ಬೆಂಗಳೂರಿನಲ್ಲಿ 4,532 ಪ್ರಕರಣಗಳು ದಾಖಲಾಗಿವೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ಪ್ರಕಟಣೆ ನೀಡಿದೆ.

Share Post