Bengaluru

ಕೊರೊನಾ ಏರಿಕೆ ಬೆನ್ನಲ್ಲೇ ಮತ್ತೊಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮತ್ತೊಂದು ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಮೂರು ಗಂಟೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಯಲಿದೆ. ತಜ್ಞರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಿಎಂ ಬಸವರಾಜ್‌ ಬೊಮ್ಮಾಯಿಯವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕೊರೊನಾ ಹೆಚ್ಚಾಗಿರುವ ಕಡೆ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಳ್ಳಲು ಚರ್ಚೆ ನಡೆಯಲಿದೆ. ಸಂಪೂರ್ಣ ಲಾಕ್‌ಡೌನ್‌ ಮಾಡುವ ಬಗ್ಗೆ ತಜ್ಞರ ಸಲಹೆ ಪಡೆಯಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್‌ ಹಾಗೂ ಸಿಎಂ ಬಸವರಾಜ್‌ ಬೊಮ್ಮಾಯಿ.

ಮಣಿಪಾಲ್‌ ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಲಿದ್ದಾರೆ ಸಿಎಂ. ಜನರ ಆರೋಗ್ಯದ ದೃಷ್ಟಿಯಿಂದ ಕಠಿಣ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿರುವುದಾಗಿ ಮಾಹಿತಿಯಿದೆ. ಈಗಾಗಲೇ ನೆರೆ ರಾಜ್ಯಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ಬ್ರೇಕ್‌ ಹಾಕಿದ್ದು, ರಾಜ್ಯದಲ್ಲೂ ಕೂಡ ಇನ್ನಷ್ಟು ಬಿಗಿ ರೂಲ್ಸ್‌ ಮಾಡುವ ಸಾಧ್ಯತೆಯಿದೆ.

Share Post