BengaluruPolitics

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ಸಂಗ್ರಹ; ಕಾಂಗ್ರೆಸ್‌ನಿಂದ ಪ್ರತಿಭಟನೆ

ರಾಮನಗರ; ಸರ್ವೀಸ್‌ ರಸ್ತೆಗಳನ್ನು ಪೂರ್ಣಗೊಳಿಸದೆ ಬೆಂಗಳೂರು- ಮೈಸೂರು ದಶಪಥ ರಸ್ತೆಯಲ್ಲಿ ಟೋಲ್‌ ಸಂಗ್ರಹಿಸುತ್ತಿರುವುಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇಲ್ಲಿನ ಶೇಷಗಿರಿಹಳ್ಳಿ ಟೋಲ್‌ ಬಳಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸರ್ವೀಸ್‌ ರಸ್ತೆ ನಿರ್ಮಾಣವಾಗುವವರೆಗೂ ಟೋಲ್‌ ಸಂಗ್ರಹಸಬಾರದು ಎಂದು ಆಗ್ರಹಿಸಿದರು.

ಹೆದ್ದಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಧರಣಿ ಕುಳಿತರು. ಇದರಿಂದಾಗಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಪ್ರತಿಭಟನಾಕಾರರು ಬಿಜೆಪಿ ಸರ್ಕಾರಗಳು ಹಾಗೂ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಮೂರು ಬಸ್‌ಗಳಲ್ಲಿ ಪ್ರತಿಭಟನಾಕಾರರನ್ನು ರಾಮನಗರಕ್ಕೆ ಕರೆದುಕೊಂಡು ಹೋಗಲಾಯ್ತು.

Share Post