Bengaluru

ಕೊರೊನಾ ಹಿನ್ನೆಲೆ: ನಾಳೆ ತಜ್ಞರೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತೀವ್ರ ಗತಿಯಲ್ಲಿ ಏರುತ್ತಿದೆ. ಈಗಾಗಲೇ ನೈಟ್‌ ಕರ್ಫ್ಯೂ, ವೀಕೆಂಡ್‌ ಕರ್ಫ್ಯೂ ಜಾರಿ ಮಾಡಲಾಗಿದೆ. ಶಾಲೆಗಳಿಗೆ ರಜೆ ನೀಡಿದ್ದು, ಇನ್ನೂ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಹೀಗಿದ್ದೂ ಕೊರೊನಾ ಸೋಂಕು ರಾಜ್ಯದಲ್ಲಿ ದಿನ ದಿನಕ್ಕೂ ವಾಯುವೇಗದಲ್ಲಿ ಹರಡುತ್ತಿದೆ. ಹೀಗಿರುವಾಗ ನಾಳೆ ಮತ್ತೆ ಸಿಎಂ ಸಭೆ ಕರೆದಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್​.ಅಶೋಕ್ ಮತ್ತು ಕೊವಿಡ್​-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ‌

ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ ಜಾರಿಗೊಳಿಸಿರುವ ನಿರ್ಬಂಧಗಳು ಜ.19ಕ್ಕೆ ಅಂತ್ಯವಾಗಲಿವೆ. ಕಠಿಣ ನಿಯಮಗಳನ್ನು ಮುಂದುವರಿಸುವ ಬಗ್ಗೆ ಮತ್ತು ಫೆಬ್ರವರಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ಸಿಎಂ ಬೊಮ್ಮಾಯಿಯವರೆಗೂ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮನೆಯಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಲಿದ್ದಾರೆ.

Share Post