ನಾಳೆ, ನಾಡಿದ್ದು ಬೆಂಗಳೂರಲ್ಲಿ ಮಹಾಮೈತ್ರಿಕೂಟದ ಸಭೆ
ಬೆಂಗಳೂರು; ಲೋಕಸಭಾ ಚುನಾವಣೆಗೆ ವಿಪಕ್ಷಗಳು ಸಜ್ಜಾಗುತ್ತಿವೆ. ಚುನಾವಣೆಗೆ ಇನ್ನೂ ಒಂದು ವರ್ಷವಿರುವಾಗಲೇ ಎಲ್ಲಾ ವಿರೋಧ ಪಕ್ಷಗಳು ಒಂದಾಗುವ ಚಿಂತನೆ ನಡೆಸುತ್ತಿವೆ. ಏನಾದರೂ ಮಾಡಿ ಈ ಬಾರಿ ಬಿಜೆಪಿಯನ್ನು ಸೋಲಿಸಬೇಕೆಂದು ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಪಣ ತೊಟ್ಟಿವೆ. ಈ ನಿಟ್ಟಿನಲ್ಲಿ ಸಭೆಗಳು ನಡೆಸಲಾಗುತ್ತಿದೆ.
ಕೆಲ ದಿನಗಳ ಹಿಂದೆ ಬಿಹಾರದಲ್ಲಿ ಸಮಾನ ಮನಸ್ಕ ಪಕ್ಷಗಳ ಸಭೆ ನಡೆಸಲಾಗಿತ್ತು. ಇದರಲ್ಲಿ ಮಹಾ ಮೈತ್ರಿಕೂಟ ರಚನೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿತ್ತು. ಇದೀಗ ಮತ್ತೆ ಸಭೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಮಹಾ ಮೈತ್ರಿಕೂಟದ ಸಭೆ ನಡೆಯಲಿದೆ.
ಕಾಂಗ್ರೆಸ್ ಸೇರಿ ಹಲವು ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಮಂಗಳವಾರ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿಯವರು ಸಭೆಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ.
ಈ ಸಭೆಯಲ್ಲಿ ಬಿಜೆಪಿಯನ್ನು ಸೋಲಿಸುವ ಬಗ್ಗೆ ಹಾಗೂ ಮಹಾ ಮೈತ್ರಿಯ ಬಗ್ಗೆ ಚರ್ಚೆಗಳು ನಡೆಯಲಿದೆ.