ಸಾರಿಗೆ ಇಲಾಖೆ ಸಿಬ್ಬಂದಿ ಬಂಪರ್ ಭಾಗ್ಯ; ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು..?
ಬೆಂಗಳೂರು; ಸಾರಿಗೆ ಇಲಾಖೆಯ ಬಸ್ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ 17 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮೊದಲು 4.07 ಕೋಟಿ ರೂಪಾಯಿ ಕೊಡಲಾಗುತ್ತಿತ್ತು. ಈಗ ಅದನ್ನು 17 ಕೋಟಿ ರೂಪಾಯಿಗೆ ಏರಿಸಲಾಗಿದೆ ಎಂದು ತಿಳಿಸಿದರು.
ಇನ್ನು ಬಸ್ ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದ ಸಚಿವರು, ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಎರಡ್ಮೂರು ತಿಂಗಳಲ್ಲಿ ಅಗ್ರಿಗೇಟರ್ ಆ್ಯಪ್ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.