ಮೂವರ ಹತ್ಯೆ ಪ್ರಕರಣ; ಫಾಜಿಲ್ ಪ್ರಕರಣದ ತನಿಖೆ ಮುಗಿದಿದೆ – ಆರಗ ಜ್ಞಾನೇಂದ್ರ
ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಕೊಲೆ ಪ್ರಕರಣಗಳ ಸಂಬಂಧ ಗೃಹ ಸಚಿವರ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫಾಜಿಲ್ ಕೊಲೆ ಪ್ರಕರಣದ ತನಿಖೆ ಮುಗಿದಿದೆ. ಈಗಾಗಲೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ತನಿಖೆ ಮುಂದುವರೆದಿದೆ. ಎನ್‌ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ ಎಂದು ಆರಗ ಜ್ಞಾನೇಂದ್ರ ಇದೇ ವೇಳೆ ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗಳು ಯಾರೆಂದು ಗೊತ್ತಾಗಿದೆ. ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.