Bengaluru

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗುತ್ತಾ ತುಳು..?; ಅಧ್ಯಯನ ತಂಡ ರಚನೆ

ಬೆಂಗಳೂರು; ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳು ಭಾಷೆಯನ್ನು ಘೋಷಣೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಆಳ್ವಾಸ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ ತಂಡ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದೆ.

ಕೇಶವ ಬಂಗೇರ, ಡಾ.ಮಾಧವ ಕೊಣಾಜೆ, ಗಣೇಶ್‌ ಅಮೀನ್‌ ಸಂಕಮಾರ್‌, ಪೃಥ್ವಿ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ, ಚಂದ್ರಹಾಸ ಕಣಂತೂರು, ಸಂಧ್ಯಾ ಆಳ್ವ ಈ ಸಮಿತಿಯ ಸದಸ್ಯರಾಗಿದ್ದಾರೆ. ಒಂದು ವಾರದಲ್ಲಿ ವರದಿ ಕೊಡುವಂತೆ ಸರ್ಕಾರ ಸೂಚನೆ ನೀಡಿದೆ.

Share Post