Bengaluru

ನೈಸ್‌ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚರಿಸಲು ನಿರ್ಬಂಧ

ಬೆಂಗಳೂರು : ನೈಸ್‌ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನಗಳು ಸಂಚರಿಸುವಂತಿಲ್ಲ. ಇದಕ್ಕೆ ನೈಸ್‌ ಸಂಸ್ಥೆ ನಿರ್ಬಂಧ ಹೇರಿದೆ. ನೈಸ್‌ ಸಂಸ್ಥೆ ಈ ಕುರಿತು ಮಾಧ್ಯಮ ಪ್ರಕಟಣೆ ಮಾಡಿದೆ. ಸುರಕ್ಷತೆಯ ಸಲುವಾಗಿ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದೇವೆ.

ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ದ್ವಿಚಕ್ರವಾಹನಗಳಿಗೆ ಪ್ರವೇಶ ಇರುವುದಿಲ್ಲ. ಈ ನಿಯಮ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.

ಬೆಂಗಳೂರು ನಗರ ಸಂಚಾರ ಜಂಟಿ ಆಯುಕ್ತರ ಸೂಚನೆ ಮೇರೆಗೆ ಈ ನಿರ್ಬಂಧ ವಿಧಿಸಲಾಗಿದೆ. 16 ಜನವರಿಯಿಂದ ಈ ಆದೇಶ ಜಾರಿಗೆ ಬರಲಿದೆ. ಬೈಕ್‌ ಸವಾರರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಲೇ ಬೇಕಿದೆ.

Share Post