ತೀರ್ಮಾನ ಆಗದ ನಿಗಮ-ಮಂಡಳಿ ಪಟ್ಟಿ; ಮತ್ತೆ ರಾಜ್ಯಕ್ಕೆ ಬರ್ತಾರೆ ಸುರ್ಜೇವಾಲಾ
ಬೆಂಗಳೂರು; ನಿಗಮ-ಮಂಡಳಿಗಳಿಗೆ ನೇಮಕ ವಿಚಾರದಲ್ಲಿ ನಿನ್ನೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ಮಹತ್ವದ ಮಾತುಕತೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿದರು. ಆದರೂ ನಿನ್ನೆ ಅಂತಿಮ ತೀರ್ಮಾನಕ್ಕೆ ಬರಲಾಗಿಲ್ಲ. ಹೀಗಾಗಿ ಸುರ್ಜೇವಾಲಾ ಅವರು ನವೆಂಬರ್ 28ರಂದು ಮತ್ತೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಕೊನೆಯ ಹಂತದ ಸಭೆ ನಡೆಯಲಿದ್ದು, ಅಂದೇ ಲಿಸ್ಟ್ ಘೋಷಣೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಹಿರಿಯ ಶಾಸಕ ಬಸವರಾಜರಾಯರೆಡ್ಡಿಯವರನ್ನು ಕರೆಸಿಕೊಂಡಿದ್ದ ಸುರ್ಜೇವಾಲಾ, ಅವರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ನೀಡುವುದಾಗಿ ಹೇಳಿದ್ದಾರೆ. ಆದ್ರೆ, ಇದನ್ನು ರಾಯರೆಡ್ಡಿ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಹಲವರಿಗೆ ಅಧಿಕಾರ ಕೊಡುವ ಬಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಒಮ್ಮತ ಮೂಡಿಲ್ಲ ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿ, ತಿಂಗಳ ಕೊನೆಯಲ್ಲಿ ಮತ್ತೆ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಚರ್ಚೆಯಾದ ಹೆಸರುಗಳ ಪಟ್ಟಿಯನ್ನು ಹೈಕಮಾಂಡ್‌ಗೆ ತಲುಪಿಸಲಿದ್ದು, ಹೈಕಮಾಂಡ್ ಕೂಡಾ ಈ ಬಗ್ಗೆ ಚರ್ಚೆ ನಡೆಸಲಿದೆ ಎಂದು ತಿಳಿದುಬಂದಿದೆ.