ಕಾಂತಾರಾ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ಮಲಾ ಸೀತಾರಾಮನ್
ಬೆಂಗಳೂರು; ಕಾಂತಾರಾ ಸಿನಿಮಾಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗಣ್ಯರು ಕೂಡಾ ಈ ಸಿನಿಮಾ ವೀಕ್ಷಣೆ ಮಾಡಿ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾಂತಾರಾ ಸಿನಿಮಾ ನೋಡಿ ಖುಷಿ ಪಟ್ಟಿದ್ದಾರೆ. ತಮ್ಮ ಆಪ್ತರು ಹಾಗೂ ಸ್ವಯಂ ಸೇವಕರ ಜೊತೆ ಕಾಂತಾರಾ ಸಿನಿಮಾ ನೋಡಿದ್ದರ ಬಗ್ಗೆ ನಿರ್ಮಲಾ ಸೀತಾರಾಮನ್ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಕಾಂತಾರಾ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರ. ಇಂತಹ ಚಿತ್ರಗಳು ಹೆಚ್ಚು ಹೆಚ್ಚು ತೆರೆಯ ಮೇಲೆ ಬರಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಿಷಬ್ ಶೆಟ್ಟಿ, ಕೇಂದ್ರ ಹಣಕಾಸು ಸಚಿವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.