BengaluruPolitics

ಮೈಸೂರು, ಚಾಮರಾಜನಗರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಬ್ಬರ

ಬೆಂಗಳೂರು; ಕೇಂದ್ರ ಗೃಹಸಚಿವ ಹಾಗೂ ಬಿಜೆಪಿ ನಾಯಕ ಅಮಿತ್‌ ಶಾ ಇಂದು ಮೈಸೂರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರಿನಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಕ್ಕೆ ಆಗಮಿಸುವ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಅನಂತರ ಅವರು ಮೂರೂ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.

ರೋಡ್‌ ಶೋಗಳನ್ನು ನಡೆಸುವ ಮೂಲಕ ಮೈಸೂರು ಭಾಗದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಚೈತನ್ಯ ಮೂಡಿಸಲು ಅಮಿತ್‌ ಶಾ ಪ್ರಯತ್ನಿಸಲಿದ್ದಾರೆ. ಇನ್ನು ಇಂದು ಸಂಜೆ ಹುಬ್ಬಳ್ಳಿಯಲ್ಲಿ ಅಮಿತ್‌ ಶಾ ಸ್ಥಳೀಯ ಬಿಜೆಪಿ ನಾಯಕರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಶೆಟ್ಟರ್‌ ಹಾಗೂ ಸವದಿ ಪಕ್ಷ ಬಿಟ್ಟಿರುವುದರಿಂದ ಆಗಿರುವ ಅನಾಹುತವನ್ನು ತಡೆಯಲು ಅಮಿತ್‌ ಶಾ ತಂತ್ರ ರೂಪಿಸುತ್ತಿದ್ದಾರೆ ಎಂದು ತಿಳದಿಬಂದಿದೆ.

Share Post